ADVERTISEMENT

ತುಮಕೂರು ವಿವಿ ಕುಲಸಚಿವ ಪ್ರೊ.ಟಿ.ವಿ.ವೆಂಕಟೇಶ್ ನಿಧನ 

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2018, 7:19 IST
Last Updated 23 ಅಕ್ಟೋಬರ್ 2018, 7:19 IST
   

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಟಿ.ವಿ.ವೆಂಕಟೇಶ್ (59) ಅವರು ಮಂಗಳವಾರ ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕುಣಿಗಲ್ ಮೂಲದವರಾದವೆಂಕಟೇಶ್ ಕುವೆಂಪು ವಿಶ್ವವಿದ್ಯಾಲಯದ ರಸಾಯನವಿಜ್ಞಾನ ವಿಭಾಗದ ಪ್ರಾಧ್ಯಾಪಕರಾಗಿದ್ದರು. 2018ರ ಆಗಸ್ಟ್‌ನಲ್ಲಿ ವಿ.ವಿ.ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT