ADVERTISEMENT

ರಾಷ್ಟ್ರೀಯ ಹೆದ್ದಾರಿಗೆ ಹರಿದ ಕೆರೆ ನೀರು: ವಾಹನ ಸಂಚಾರಕ್ಕೆ ಅಡ್ಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2022, 4:47 IST
Last Updated 20 ಅಕ್ಟೋಬರ್ 2022, 4:47 IST
ಕೆರೆ ನೀರಿನಿಂದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ
ಕೆರೆ ನೀರಿನಿಂದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ   

ತುಮಕೂರು: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾಲ್ಲೂಕಿನ ಕೋರಾ ಹೋಬಳಿ ವ್ಯಾಪ್ತಿಯ ವಿವಿಧ ಕೆರೆಗಳ ನೀರು ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದು, ಹೆದ್ದಾರಿಯ ಒಂದು ಬದಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿದೆ‌.

ಕೋರಾ ಹೋಬಳಿ ಹಂಚಿಹಳ್ಳಿಯ ಪರಿಶಿಷ್ಟರ ಕಾಲೊನಿ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿವೆ. ಹೋಬಳಿಯಾದ್ಯಂತ ಕೆರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಬ್ರಹ್ಮಸಂದ್ರ, ಕೆಸ್ತೂರು, ಹಿರೇತೊಟ್ಲುಕೆರೆ, ಚಿಕ್ಕತೊಟ್ಲುಕೆರೆ, ಮೆಳೇಹಳ್ಳಿ ಕೆರೆ ನೀರು ಹೆಬ್ಬಾಕ ಕೆರೆ ಪ್ರವೇಶಿಸುತ್ತಿದ್ದು, ಹೆಬ್ಬಾಕ ಕೆರೆಯ ಹಿನ್ನೀರಿನ ಪ್ರದೇಶವೂ ಜಲಾವೃತವಾಗಿದೆ.

ADVERTISEMENT

ಊರುಕೆರೆ ಸಮೀಪವಿರುವ ಜೈನ್ ಪಬ್ಲಿಕ್ ಶಾಲೆ ಸಂಪೂರ್ಣ ಜಲಾವೃತವಾಗಿದೆ. ಊರುಕೆರೆ ಕಡೆಯಿಂದ ಮೆಳೇಹಳ್ಳಿ- ಬ್ರಹ್ಮಸಂದ್ರ- ಕೆಸ್ತೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯೂ ನೀರಿನಿಂದ ಆವೃತವಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.