ADVERTISEMENT

ಟೆಂಪೊ ಮೇಲೆ ಬಿದ್ದ ಮರ; ತಪ್ಪಿದ ಅನಾಹುತ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 8:04 IST
Last Updated 2 ಆಗಸ್ಟ್ 2022, 8:04 IST
   

ತುಮಕೂರು: ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ರಾಯರತೋಪಿನ ಬಳಿ ತುಮಕೂರು– ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಕೋಳಿ ಸಾಗಿಸುತ್ತಿದ್ದ ಟೆಂಪೊ ಮೇಲೆ ಆಲದ ಮರವೊಂದು ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಭಾರಿ ಮಳೆಯಿಂದಾಗಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT