ಎಚ್.ವಿ.ವೆಂಕಟೇಶ್
ತುಮಕೂರು: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷರಾಗಿ ಕಾಂಗ್ರೆಸ್‌ನ ಪಾವಗಡ ಶಾಸಕ ಎಚ್.ವಿ.ವೆಂಕಟೇಶ್ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೆಂಕಟೇಶ್ 9 ಮತಗಳನ್ನು ಪಡೆದು ಚುನಾಯಿತರಾದರೆ, ಪ್ರತಿಸ್ಪರ್ಧಿ ಎಸ್.ಆರ್.ಗೌಡ 4 ಮತಗಳನ್ನು ಪಡೆದು ಪರಾಭವಗೊಂಡರು.
ವೆಂಕಟೇಶ್ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿತ್ತು. ತುಮುಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಮ ನಿರ್ದೇಶಿತ ಸದಸ್ಯರೊಬ್ಬರು ಅಧ್ಯಕ್ಷರಾದಂತಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ನಿರ್ದೇಶಕರಿಗೆ ಅವಕಾಶ ಸಿಗದಿರುವುದಕ್ಕೆ ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಚುನಾವಣೆಯಲ್ಲಿ ಆಯ್ಕೆಯಾಗಿದ್ದ ನಿರ್ದೇಶಕರಿಗೆ ಅವಕಾಶ ನೀಡಬೇಕಿತ್ತು. ನಾಮ ನಿರ್ದೇಶಿತ ಸದಸ್ಯರಿಗೆ ಅವಕಾಶ ನೀಡುವುದಾಗಿದ್ದರೆ ಚುನಾವಣೆ ಏಕೆ ನಡೆಸಬೇಕಿತ್ತು. ನಿರ್ದೇಶಕರಾಗಿ ಏಕೆ ಆಯ್ಕೆ ಆಗಬೇಕಿತ್ತು ಎಂದು ನಿರ್ದೇಶಕರೊಬ್ಬರು ಆಕ್ರೋಶ ಹೊರ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.