ADVERTISEMENT

ಹ್ಯಾಂಡ್‌ಬಾಲ್‌ ಪಂದ್ಯಾವಳಿ ಆರಂಭ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 6:07 IST
Last Updated 26 ನವೆಂಬರ್ 2025, 6:07 IST
ತುರುವೇಕೆರೆ ಬಿಜಿಎಸ್ ಕ್ರೀಡಾಂಗಣದಲ್ಲಿ ಹ್ಯಾಂಡ್‌ಬಾಲ್ ಪಂದ್ಯಾವಳಿಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಉದ್ಘಾಟಿಸಿದರು
ತುರುವೇಕೆರೆ ಬಿಜಿಎಸ್ ಕ್ರೀಡಾಂಗಣದಲ್ಲಿ ಹ್ಯಾಂಡ್‌ಬಾಲ್ ಪಂದ್ಯಾವಳಿಯನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಉದ್ಘಾಟಿಸಿದರು   

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಟಿಬಿ ಕ್ರಾಸ್‌ನಲ್ಲಿರುವ ಬಿಜಿಎಸ್ ಕ್ರೀಡಾಂಗಣದಲ್ಲಿ 14 ರಿಂದ 17 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾವಳಿ ಮಂಗಳವಾರ ನಡೆಯಿತು.

32 ತಂಡಗಳ ಕ್ರೀಡಾಪಟುಗಳು ಪಥಸಂಚಲನ ಮಾಡಿದರು. ಶ್ವೇತವರ್ಣದ ಕುದುರೆ, ಪುಟ್ಟಮಕ್ಕಳ ವೀರಗಾಸೆ, ಪೂರ್ಣಕುಂಭ ಹೊತ್ತ ಮಕ್ಕಳು, ಕೋಲಾಟ, ಚಿಟ್ಟಿಮೇಳ, ಸೋಮನ ಕುಣಿತದೊಂದಿಗೆ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಉದ್ಘಾಟಿಸಿದರು. 

ರಾಜ್ಯ ಶಾಲಾ ಶಿಕ್ಷಣ ಇಲಾಖಾ ಜಂಟಿ ನಿರ್ದೇಶಕ ನರಸಿಂಹಯ್ಯ ಮಾತನಾಡಿ, ಸರ್ಕಾರ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಮಕ್ಕಳು ಇದರ ಸದುಪಯೋಪಡಿಸಿಕೊಳ್ಳಬೇಕು. ಪ್ರತಿಭೆ ಅನಾವರಣಗೊಳ್ಳಲು ಸೂಕ್ತ ತರಬೇತಿ  ನೀಡಲಾಗುತ್ತಿದೆ ಎಂದರು.

ADVERTISEMENT

ನಾಲ್ಕು ಅಂಕಣಗಳಲ್ಲಿ ವಿವಿಧ ರಾಜ್ಯಗಳಿಂದ ಬಂದಿದ್ದ 24 ತಂಡಗಳು ಲೀಗ್ ಹಂತದ ಪಂದ್ಯಗಳನ್ನಾಡಿದವು. 616 ಕ್ರೀಡಾಪಟುಗಳು, 32 ತರಬೇತುದಾರರು, 16 ತೀರ್ಪುಗಾರರು, ತಾಂತ್ರಿಕ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಹಂಪಿ ಹೇಮಕೂಟದ ದಯಾನಂದ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಸ್ಕೂಲ್‌ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾದ ಮೇಲ್ವಿಚಾರಕಿ ಕನಕಾ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಧುಚಂದ್ರ, ಬಿಇಒ ಸೋಮಶೇಖರ್‌, ಹ್ಯಾಂಡ್‌ಬಾಲ್‌ ಅಸೋಷಿಯೇಷ್ ಉಪಾಧ್ಯಕ್ಷ ಪುಟ್ಟರಂಗಪ್ಪ, ಡಿ.ಎನ್.ಲೋಕೇಶ್‌, ಸಿ.ವಿ.ಮಹಲಿಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.