ADVERTISEMENT

ತುರುವೇಕೆರೆ: 3,375 ಮನೆ ಮಂಜೂರು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 8:15 IST
Last Updated 19 ಮಾರ್ಚ್ 2023, 8:15 IST
ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಕೊಂಡಜ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಶಾಸಕ ಮಸಾಲ ಜಯರಾಮ್ ಉದ್ಘಾಟಿಸಿದರು. ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ಸತೀಶ್ ಕುಮಾರ್ ಹಾಜರಿದ್ದರು
ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಕೊಂಡಜ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಶಾಸಕ ಮಸಾಲ ಜಯರಾಮ್ ಉದ್ಘಾಟಿಸಿದರು. ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ಸತೀಶ್ ಕುಮಾರ್ ಹಾಜರಿದ್ದರು   

ತುರುವೇಕೆರೆ: ‘ರಾಜ್ಯ ಸರ್ಕಾರ ಕ್ಷೇತ್ರಕ್ಕೆ 3,375 ಮನೆಗಳನ್ನು ಮಂಜೂರು ಮಾಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೆಲವೇ ದಿನಗಳಲ್ಲಿ ಆದೇಶ ಪತ್ರ ನೀಡಲಾಗುವುದು’ ಎಂದು ಶಾಸಕ ಮಸಾಲ ಜಯರಾಮ್ ತಿಳಿಸಿದರು.

ತಾಲ್ಲೂಕಿನ ದಂಡಿನಶಿವರ ಹೋಬಳಿಯ ಕೊಂಡಜ್ಜಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಜನಪರ ಕೆಲಸ ಮಾಡುತ್ತಿದೆ. ಹಲವು ಅಭಿವೃದ್ದಿ ಕಾರ್ಯಕ್ರಮಗಳ ಜೊತೆಗೆ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ನೀಡುತ್ತಿದೆ. ಹಲವು ಯೋಜನೆಗಳನ್ನು ಪಡೆಯಲು ಜನರು ಎಲ್ಲಾ ಇಲಾಖೆಗಳಿಗೂ ಅಲೆಯುವುದನ್ನು ತಪ್ಪಿಸಿದೆ. ಸಂಧ್ಯಾ ಸುರಕ್ಷಾ, ವಿಧವಾ ವೇತನದ ಆದೇಶ ಪತ್ರವನ್ನು ಸ್ಥಳದಲ್ಲಿಯೇ ನೀಡಲಾಗುವುದು. ಜೊತೆಗೆ, ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮಗಳ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಆದೇಶ ಪತ್ರ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ತಾ.ಪಂ. ಇಒ ಸತೀಶ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಪ್ರಿಯಾ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ, ಮುಖಂಡ ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.