ADVERTISEMENT

ತುರುವೇಕೆರೆ‌: ಮಹಿಳೆಯ ಚಿನ್ನಾಭರಣ ದೋಚಿದ್ದ ಬಾಲಕ ವಶ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 6:06 IST
Last Updated 2 ನವೆಂಬರ್ 2025, 6:06 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತುರುವೇಕೆರೆ‌: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಕಣತೂರಿನ ಮಹಿಳೆ ಸರ್ವಮಂಗಳ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಬಾಲಕನನ್ನು ಪಟ್ಟಣದ ಪೊಲೀಸರು ಬಂಧಿಸಿ, ಆತನಿಂದ 54 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬಾಲಕನನ್ನು ಪೊಲೀಸ್ ರಕ್ಷಣೆಯಲ್ಲಿ ಇಡಲಾಗಿದೆ.

ADVERTISEMENT

ಘಟನೆ ವಿವರ: ಸರ್ವಮಂಗಳ ಅವರ ಅಕ್ಟೋಬರ್ 29ರಂದು ತಮ್ಮ ತೋಟದಲ್ಲಿ ಎಮ್ಮೆ ಮೇಯಿಸುತ್ತಿರುವಾಗ ಬಾಲಕ ರೀಪ್‌ನಿಂದ ಹಲ್ಲೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.