ADVERTISEMENT

ತುರುವೇಕೆರೆ ಬಂದ್ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 8:54 IST
Last Updated 3 ಆಗಸ್ಟ್ 2023, 8:54 IST
   

ತುರುವೇಕೆರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೊಬ್ಬರಿಗೆ 20 ಸಾವಿರ ರೂಪಾಯಿಗಳ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಬುಧವಾರ ಕರೆ ನೀಡಿದ್ದ ತುರುವೇಕೆರೆ ಬಂದು ಯಶಸ್ವಿಯಾಗಿದೆ.

ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಪೆಟ್ರೋಲ್ ಬಂಕ್ಗಳು, ಹಾಲಿನ ಅಂಗಡಿಗಳು, ಔಷಧಿ ಅಂಗಡಿಗಳು, ಬ್ಯಾಂಕ್ಗಳು, ಶಾಲಾ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಅಂಗಡಿ ಮಾಲೀಕರು, ವರ್ತಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ ಬಂದ್ಗೆ ಸಾತ್ ನೀಡಿದ್ದರು.

ಎಂದಿನಂತೆ ರಾಜ್ಯ ರಸ್ತೆ ಸಾರಿಗೆ ಬಸ್ ಗಳು, ಆಟೋ, ಬೈಕ್ ಹಾಗು ಇನ್ನಿತರ ವಾಹನಗಳ ಸಂಚಾರ ಸಾಮಾನ್ಯವಾಗಿತ್ತು.

ADVERTISEMENT

ಪಟ್ಟಣದ ಸಾರ್ವಜನಿಕರ ಕಚೇರಿಗಳಲ್ಲಿ ಸಾರ್ವಜನಿಕರಿಲ್ಲದೆ ಕಚೇರಿಗಳು ಬಿಕೋ ಎನ್ನುತ್ತಿದ್ದವು.

ರೈತ ಸಂಘದ ಪದಾಧಿಕಾರಿಗಳು, ರೈತರು, ವಿವಿಧ ಸಂಘಟನೆಗಳ ಪದಾಧಿಕಾರಿಗಳ ಒಳಗೊಂಡಂತೆ ಪಟ್ಟಣದ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಇದಕ್ಕೂ ಮೊದಲು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರೈತರು ಮೆರವಣಿಗೆ ನಡೆಸಿ, ಘೋಷಣೆಗಳನ್ನು ಕೂಗಿ ಬಂದ್ ಆಚರಿಸಿದರು. ಬಂದ್ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.