ತುರುವೇಕೆರೆ: ರಾಜ್ಯದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ರಾಜ್ಯಸರ್ಕಾರ ಕೇವಲ ₹100 ಕೋಟಿ ಮೀಸಲಿಟ್ಟಿರುವುದನ್ನು ಖಂಡಿಸಿ ಏಪ್ರಿಲ್ 21 ಮತ್ತು 22ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಹೊಣಕೆರೆ ಕೃಷ್ಣಸ್ವಾಮಿ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಅಲೆಮಾರಿ ಮತ್ತು ಅರೆ ಅಲೆಮಾರಿ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುಮಾರು 46 ಜಾತಿಗಳನ್ನು ಹೊಂದಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯವನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂದರು.
ಪದಾಧಿಕಾರಿಗಳು: ತಾಲ್ಲೂಕು ಉಪಾಧ್ಯಕ್ಷರಾಗಿ ನೆಮ್ಮದಿಗ್ರಾಮ ರಂಗಸ್ವಾಮಿ, ಅಕ್ಕಳಸಂದ್ರ ಗೊಲ್ಲರಹಟ್ಟಿ ಪ್ರಕಾಶ್, ಸಂಘಟನಾ ಕಾರ್ಯದರ್ಶಿಗಳಾಗಿ ಸಾದರಹಳ್ಳಿ ಸ್ವಾಮೀಜಿ ಮತ್ತು ಥರಮನಕೋಟೆಯ ತಿಮ್ಮೇಗೌಡ ಅವರನ್ನು ನೇಮಿಸಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಗ್ರಪ್ಪ, ಜಿಲ್ಲಾ ಉಪಾಧ್ಯಕ್ಷ ಥರಮನಕೋಟೆ ರಾಜು, ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ ಹರಿದಾಸನಹಳ್ಳಿಯ ಮಂಜಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಾಚೇನಹಳ್ಳಿ ಸತೀಶ್ ಮೂರ್ತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.