ADVERTISEMENT

ಬಿಜೆಪಿ ತೆಕ್ಕೆಗೆ ತುರುವೇಕೆರೆ ಪಟ್ಟಣ ಪಂಚಾಯತ್

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 14:25 IST
Last Updated 10 ಸೆಪ್ಟೆಂಬರ್ 2024, 14:25 IST
ತುರುವೇಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿಯ ಆಶಾ ರಾಜಶೇಖರ್ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾದರು
ತುರುವೇಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿಯ ಆಶಾ ರಾಜಶೇಖರ್ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾದರು    

ತುರುವೇಕೆರೆ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸ್ಥಳೀಯ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಶಾ ರಾಜಶೇಖರ್, ಉಪಾಧ್ಯಕ್ಷರಾಗಿ ಭಾಗ್ಯಮ್ಮ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳೆರಡನ್ನೂ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಮಾಜಿ ಶಾಸಕ ಜಯರಾಂ ಯಶಸ್ವಿಯಾಗಿದ್ದಾರೆ.

ಮೊದಲನೆ ಅವಧಿಯಲ್ಲಿ ಬಿಜೆಪಿ ಸುಮಾರು ಎರಡೂವರೆ ವರ್ಷ ಅಧಿಕಾರ ನೆಡೆಸಿತ್ತು. ಎರಡನೇ ಅವಧಿಯಲ್ಲೂ ಬಿಜೆಪಿ ಅಧಿಕಾರ ಹಿಡಿದಿದೆ. ಆಶಾ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕಿನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದಾಗಿ ಜೆಡಿಎಸ್‌ಗೆ ಅಧ್ಯಕ್ಷ ಸ್ಥಾನ ಸಿಗಬಹುದೆಂಬ ನಿರೀಕ್ಷೆ ಇದ್ದು, ಅದು ಹುಸಿಯಾಗಿದೆ.

ADVERTISEMENT

14 ಸದಸ್ಯರ ಬಲದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 12 ಸದಸ್ಯರು ಹಾಜರಿದ್ದರು. ಇಬ್ಬರು ಗೈರಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಎನ್.ಎ.ಕುಂ.ಇ ಅಹಮದ್ ಕರ್ತವ್ಯ ನಿರ್ವಹಿಸಿದರು.

ನೂತನ ಅಧ್ಯಕ್ಷೆ ಆಶಾ ಮಾತನಾಡಿ, ‘ಪಟ್ಟಣದ ಅಭಿವೃದ್ಧಿಗೆ ಎಲ್ಲರ ಸಹಕಾರದೊಂದಿದೆ ಶ್ರಮಿಸಲಾಗುವುದು’ ಎಂದರು.

ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ. ಸಿಹಿ ಹಂಚಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಯಜಮಾನ್ ಮಹೇಶ್, ಎನ್.ಆರ್.ಸುರೇಶ್, ಅಂಜನ್ ಕುಮಾರ್, ಮಧು, ರವಿ, ಚಿದಾನಂದ್, ಫ್ರಭಾಕರ್, ಸ್ವಪ್ನಾನಟೇಶ್, ಜಯಮ್ಮ, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಹಾಗೂ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.