ADVERTISEMENT

ತುರುವೇಕೆರೆ: ಸೆಪ್ಟೆಂಬರ್ 22ಕ್ಕೆ 6ನೇ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 4:45 IST
Last Updated 16 ಸೆಪ್ಟೆಂಬರ್ 2025, 4:45 IST
ತುರುವೇಕೆರೆಯಲ್ಲಿ ಸಮ್ಮೇಳದ ಪೂರ್ವಭಾವಿಯಾಗಿ ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿರಾಜು ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು
ತುರುವೇಕೆರೆಯಲ್ಲಿ ಸಮ್ಮೇಳದ ಪೂರ್ವಭಾವಿಯಾಗಿ ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿರಾಜು ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು   

ತುರುವೇಕೆರೆ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲ್ಲೂಕು ಮಟ್ಟದ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆಪ್ಟಂಬರ್ 22ರಂದು ವೈಟಿ ರಸ್ತೆಯಲ್ಲಿರುವ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನಡೆಯಲಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು.

ಕನ್ನಡ ಭವನದಲ್ಲಿ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಸಮ್ಮೇಳನದ ಅಧ್ಯಕ್ಷ ಸಂಪಿಗೆ ತೋಂಟದಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಂ.ಟಿ.ಕೃಷ್ಣಪ್ಪ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ.

ಸೋಮವಾರ ಬೆಳಗ್ಗೆ ರಾಷ್ಟ್ರ ಧ್ವಜಾರೋಹಣವನ್ನು ತಹಶೀಲ್ದಾರ್ ಕುಂಞ.ಅಹಮದ್ ನೆರವೇರಿಸಲಿದ್ದಾರೆ. ನಾಡ ಧ್ವಜಾರೋಹಣವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶೀಲಾ ನೆರವೇರಿಸಲಿದ್ದಾರೆ. ಪ್ರವಾಸಿ ಮಂದಿರದಿಂದ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದರು.

11 ಗಂಟೆಗೆ ಸಮಾರಂಭ ಪ್ರಾರಂಭವಾಗಲಿದೆ. ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಗೃಹಸಚಿವ ಜಿ.ಪರಮೇಶ್ವರ್, ಕಲ್ಪವಿಜಯ ನೆನಪಿನ ಸಂಚಿಕೆಯನ್ನು ಕೇಂದ್ರ ಸಚಿವ ವಿ.ಸೋಮಣ್ಣ ಬಿಡುಗಡೆಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಎಂ.ಟಿ.ಕೃಷ್ಣಪ್ಪ ವಹಿಸಲಿದ್ದಾರೆ. ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಸಾಹಿತಿ ಬರಗೂರು ರಾಮಚಂದ್ರಪ್ಪ, ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎನ್.ಸಿದ್ದಲಿಂಗಪ್ಪ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಮೂರು ಗೋಷ್ಠಿ ನಡೆಯಲಿದ್ದು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ 5ಕ್ಕೆ ಸಮಾರೋಪ ನಡೆಯಲಿದೆ. ಕಾಡಸಿದ್ದೇಶ್ವರ ಮಠದ ಶಿವಯೋಗೀಶ್ವರ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಜಗ್ಗೇಶ್, ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಕೇಂದ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ, ರಂಗಕರ್ಮಿ ಬಾಬು ಹಿರಣ್ಣಯ್ಯ ಭಾಗವಹಿಸಲಿದ್ದಾರೆ.

ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ಕಸಾಪ ಗೌರವಾಧ್ಯಕ್ಷ ಬೋರೇಗೌಡರು, ನಂ.ರಾಜುಮುನಿಯೂರು, ಸಾ.ಶಿ.ದೇವರಾಜು, ಪರಿಷತ್ ಸದಸ್ಯ ಮಂಜಯ್ಯಗೌಡ, ಕೆಂಪರಾಜು, ಷಣ್ಮುಕಪ್ಪ, ರಾಮಣ್ಣ, ಪರಮೇಶ್ವರ ಸ್ವಾಮಿ, ಕಾಂತರಾಜು, ಮಂಜೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.