ADVERTISEMENT

ಕೊಟ್ಟಿಗೆಗೆ ಬೆಂಕಿ, ಎರಡು ಎಮ್ಮೆ ಸಾವು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2023, 14:08 IST
Last Updated 3 ಆಗಸ್ಟ್ 2023, 14:08 IST
ಎಮ್ಮೆ (ಪ್ರಾತಿನಿಧಿಕ ಚಿತ್ರ)
ಎಮ್ಮೆ (ಪ್ರಾತಿನಿಧಿಕ ಚಿತ್ರ)   

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಪೆರಮಸಂದ್ರ ಗ್ರಾಮದಲ್ಲಿ ಬುಧವಾರ ತಡರಾತ್ರಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಎರಡು ಎಮ್ಮೆ ಮೃತಪಟ್ಟು, ಮೂರು ಎಮ್ಮೆ ಗಂಭೀರವಾಗಿ ಗಾಯಗೊಂಡಿವೆ.

ಗ್ರಾಮದ ಯೋಗೀಶ್ ಕುಟುಂಬ ಹೈನುಗಾರಿಕೆಯಲ್ಲಿ ತೊಡಗಿದೆ. ಬೆಂಕಿ ತಗುಲಿದ ಪರಿಣಾಮ ಕೊಟ್ಟಿಗೆಯಲ್ಲಿ ಶೇಖರಿಸಿಟ್ಟಿದ್ದ ಮೇವು ಹಾಗೂ ಬೂಸ ಬೆಂಕಿಗೆ ಆಹುತಿಯಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಹಾಗೂ ಪಶುವೈದ್ಯಾಧಿಕಾರಿ ಪರಿಶೀಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.