ADVERTISEMENT

ತುಮಕೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 6:45 IST
Last Updated 13 ಜನವರಿ 2023, 6:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಜಿಲ್ಲೆಯ ತಿಪಟೂರು ಹಾಗೂ ಕುಣಿಗಲ್ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ವ್ಯಕ್ತಿ ಸಾವು:
ತಿಪಟೂರು ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಕಾಡುಶೆಟ್ಟಿಹಳ್ಳಿ– ಕರಡಾಳು ಬಳಿ ಗುರುವಾರ ರಾತ್ರಿ ಬೈಕ್‌ಗೆ ವಾಹನ ಗುದ್ದಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಾಂತನಹಳ್ಳಿ ಗ್ರಾಮದ ಸದಾಶಿವಯ್ಯ (62) ಮೃತಪಟ್ಟವರು. ನೊಣವಿನಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಯುವಕ ಸಾವು:
ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ನಾಗೇಗೌಡನಪಾಳ್ಯದ ಸಮೀಪ ಸಂಭವಿಸಿದೆ.

ಚನ್ನರಾಯಪಟ್ಟಣ ತಾಲ್ಲೂಕು ಗಂಡಸಿ ಹೋಬಳಿ ಚೌಡಿಕುಪ್ಪೆ ಗ್ರಾಮದ ಅಭಿಷೇಕ್ (25) ಮೃತರು. ಕಾಮತ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಡೆಯೂರಿಗೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.