ತುಮಕೂರು: ನಿವೇಶನವೊಂದರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ ಇಬ್ಬರು ಕೊಲೆಯಲ್ಲಿ ಅಂತ್ಯವಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ನಿವೇಶನವೊಂದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿದ್ದು ಶ್ರೀಧರಗುಪ್ತ ಮತ್ತು ಸಹಚರರು ಏಕಾಏಕಿ ಚಾವುವಿನಿಂದ ಮೂವರಿಗೆ ತಿವಿದು ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಿಡಿಗೇಶಿ ಗ್ರಾಮದ ಶಿಲ್ಪ (35) ಮತ್ತು ರಾಮಾಂಜಿನೇಯ (42) ಎಂಬುವವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ ಅವರಿಗೆ ಗಂಭೀರ ಗಾಯವಾಗಿವೆ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.