ADVERTISEMENT

ಮನೆ ಕಳವು ಅಪರಾಧಿಗೆ ಎರಡು ವರ್ಷ ಸಜೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 6:09 IST
Last Updated 14 ಮಾರ್ಚ್ 2023, 6:09 IST

ತಿಪಟೂರು: ಎರಡು ಪ್ರತ್ಯೇಕ ಮನೆ ಕಳವು ಪ್ರಕರಣದಲ್ಲಿ ಆರೋಪಿಗೆ ಎರಡು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಮಂಜುನಾಥ ಅಲಿಯಾಸ್ ಕಲ್ಕೆರೆ ಮಂಜ ಶಿಕ್ಷೆಗೊಳಗಾದ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರನಗರ ಬಡಾವಣೆಯಲ್ಲಿ ಕಳೆದ ವರ್ಷ ಎರಡು ಮನೆಗಳಲ್ಲಿ ಈತ ಕಳವು ಮಾಡಿದ್ದ. ಈತನನ್ನು ನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಿ.ಎಫ್. ಮಹಮದ್ ಆರೀಪ್‌ ಉಲ್ಲಾ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳಲ್ಲಿ ತಲಾ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿದ್ದಾರೆ.

ಸಹಾಯಕ ಸರ್ಕಾರಿ ಅಭಿಯೋಜಕ ಅನ್ಸರ್ ಪಾಷ ಎಂ. ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.