ADVERTISEMENT

ಅವಿರೋಧ ಆಯ್ಕೆ: ನಿಗಾ ಇಡಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 3:28 IST
Last Updated 20 ಡಿಸೆಂಬರ್ 2020, 3:28 IST
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ದಸಂಸ ಹಾಗೂ ಪ್ರಗತಿಪರ ಸಂಘಟನೆ ಕಾರ್ಯಕರ್ತರು
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ದಸಂಸ ಹಾಗೂ ಪ್ರಗತಿಪರ ಸಂಘಟನೆ ಕಾರ್ಯಕರ್ತರು   

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳ ಮೇಲೆ ಪೊಲೀಸರು ನಿಗಾ ಇಡಬೇಕು. ಚುನಾವಣಾಧಿಕಾರಿ ತನಿಖೆ ನಡೆಸಬೇಕು. ದೇವಾಲಯಗಳ ಕಟ್ಟಡಗಳ ಅಭಿವೃದ್ಧಿಗೆ ಹಣ ಕೊಟ್ಟು ಆಯ್ಕೆಯಾಗಿರುವ ವದಂತಿ ಜಾಸ್ತಿ ಇದ್ದು ಅಂತಹವರ ವಿರುದ್ಧ ಗೂಂಡಾ ಕಾಯ್ದೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಹಾಗೂ ಪ್ರಗತಿ ಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

ಗ್ರಾಮಗಳ ಜನರ ಮೇಲೆ ಒತ್ತಡ ಹೇರಿ ಕೆಲವರು ಆಯ್ಕೆ ಆಗಿರಬಹುದು. ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸದಸ್ಯರ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ, ಅವಿರೋಧ ಆಯ್ಕೆಗಳು ಸಾಕಷ್ಟು ಕಡೆ ನಡೆದಿದೆ. ದೇವಾಲಯಗಳ ಅಭಿವೃದ್ಧಿ ಹೆಸರಿನಲ್ಲಿ ಹಣ ಪಡೆದು ಕೆಲವು ಕಡೆ ಅವಿರೋಧ ಆಯ್ಕೆ ನಡೆದಿದೆ.

ದೇವಾಲಯ ಅಭಿವೃದ್ಧಿ ಮಂಡಳಿ ಸದಸ್ಯರು ಹಣ ಪಡೆದಿದ್ದಾರೆ. ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಬೇಕು. ದೇವಾಲಯಕ್ಕೆ ಹಣ ಕೊಟ್ಟು ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳ ಸದಸ್ಯತ್ವ ರದ್ದುಮಾಡಿ ಅವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ಗಡಿಪಾರು ಮಾಡಬೇಕು ಎಂದು ಕೋರಿದರು.

ADVERTISEMENT

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ, ಮುಖಂಡರಾದ ಎಚ್.ಬಿ.ರಾಜೇ, ಸೈಯ್ಯದ್ ಅಲ್ತಾಫ್‍, ಎನ್.ಕೆ.ನಿಧಿಕುಮಾರ್, ಯೋಗೀಶ್‍ ಮೆಳೇಕಲ್ಲಹಳ್ಳಿ, ನಂಜುಂಡಪ್ಪ, ತಾಜ್ ಉದ್ದೀನ್ ಷರೀಪ್, ರಂಗನಾಥ, ಕೆ.ಶಿವರಾಜ್, ಕೌತಮಾರನಹಳಿ ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.