ADVERTISEMENT

ಕೊಡಿಗೇನಹಳ್ಳಿ| ಸಂತೆ ಮೈದಾನದಲ್ಲಿ ಅನಧಿಕೃತ ಪೆಟ್ಟಿಗೆ ಅಂಗಡಿ: ತೆರವಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜುಲೈ 2023, 13:24 IST
Last Updated 7 ಜುಲೈ 2023, 13:24 IST
ಕೊಡಿಗೇನಹಳ್ಳಿ ಸಂತೆಮೈದಾನದಲ್ಲಿ ನಿರ್ಮಾಣವಾಗಿರುವ ಅನಧಿಕೃತ ಅಂಗಡಿಗಳು
ಕೊಡಿಗೇನಹಳ್ಳಿ ಸಂತೆಮೈದಾನದಲ್ಲಿ ನಿರ್ಮಾಣವಾಗಿರುವ ಅನಧಿಕೃತ ಅಂಗಡಿಗಳು   

ಕೊಡಿಗೇನಹಳ್ಳಿ: ಗ್ರಾಮದ ಸಂತೆ ಬೀದಿಯಲ್ಲಿ ಅನಧಿಕೃತವಾಗಿ ಅಂಗಡಿ ತಲೆ ಎತ್ತುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. 

ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಾಂಪೌಂಡ್ ಪಕ್ಕದಲ್ಲಿರುವ ಸಂತೆ ಮೈದಾನದ ಸರ್ಕಾರಿ ಸ್ಥಳದಲ್ಲಿ ಹಲವು ಪೆಟ್ಟಿಗೆ ಅಂಗಡಿ ತಲೆ ಎತ್ತುತ್ತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.‌

ಅಧಿಕಾರಿಗಳು ಗಮನಹರಿಸಿ ಅನಧಿಕೃತವಾಗಿ ನಿರ್ಮಿಸಿರುವ ಎಲ್ಲ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ADVERTISEMENT

‘ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ನಿರ್ಮಿಸಿರುವ ಅಕ್ರಮ ಪೆಟ್ಟಗೆಗಳನ್ನು ತೆರವುಗೊಳಿಸುವುದಲ್ಲದೇ, ಶಾಲಾ ಕಾಂಪೌಂಡ್ ಗೇಟ್‌ಗೆ ಅಡ್ಡಲಾಗಿ ಇಟ್ಟಿರುವ ಅಂಗಡಿಯನ್ನು ತೆರವುಗೊಳಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು’ ಎಂದು ಹಳೆ ವಿದ್ಯಾರ್ಥಿ ಸಿರಾಜ್ ಅಹಮದ್ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.