ADVERTISEMENT

ತುಮಕೂರು ರೈತರ ಜಮೀನಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವ ಗಿರಿರಾಜ್ ಸಿಂಗ್

​ಪ್ರಜಾವಾಣಿ ವಾರ್ತೆ
Published 9 ಮೇ 2022, 7:41 IST
Last Updated 9 ಮೇ 2022, 7:41 IST
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ತಾಲ್ಲೂಕಿನ ಮಸಣಾಪುರಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮದ ಸಾವಯವ ರೈತ ಎಂ.ಎಸ್.ಮೃತ್ಯುಂಜಯ ಅವರ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ವೀಕ್ಷಿಸಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ತಾಲ್ಲೂಕಿನ ಮಸಣಾಪುರಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮದ ಸಾವಯವ ರೈತ ಎಂ.ಎಸ್.ಮೃತ್ಯುಂಜಯ ಅವರ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ವೀಕ್ಷಿಸಿದರು.   

ತುಮಕೂರು: ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ತಾಲ್ಲೂಕಿನ ಮಸಣಾಪುರಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮದ ಸಾವಯವ ರೈತ ಎಂ.ಎಸ್.ಮೃತ್ಯುಂಜಯ ಅವರ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ವೀಕ್ಷಿಸಿದರು.

ಎಂಟು ಎಕರೆಯಲ್ಲಿ ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡು, ಕೃಷಿಯಲ್ಲಿ ಯಶಸ್ಸು ಕಂಡ ಬಗ್ಗೆ ರೈತರಿಂದ ಮಾಹಿತಿ ಪಡೆದರು.

ಇತರೆ ರೈತರು ಮೃತ್ಯುಂಜಯ ಅವರನ್ನು ಮಾದರಿಯಾಗಿ ತೆಗೆದುಕೊಂಡು ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆದಾಯ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ADVERTISEMENT

ಸಚಿವ ಗಿರಿರಾಜ್ ಸಿಂಗ್ ಅಂಜೂರ ಹಣ್ಣಿನ ರುಚಿ ಸವಿದರು. ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.