ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೀಲಿಹಳ್ಳಿ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಪಟ್ಟಣದ ಬೂರ್ಕನಹಟ್ಟಿಯ ರಂಜಿತ್ ರಮೇಶ್ (25) ಮೃತಪಟ್ಟವರು.
ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.