ADVERTISEMENT

ಮಧುಗಿರಿ|ಅವೈಜ್ಞಾನಿಕ ಕಾಮಗಾರಿ: ಜಿಲ್ಲಾಧಿಕಾರಿ ತರಾಟೆ

​ಪ್ರಜಾವಾಣಿ ವಾರ್ತೆ
Published 23 ಮೇ 2025, 12:46 IST
Last Updated 23 ಮೇ 2025, 12:46 IST
ಮಧುಗಿರಿ 15ನೇ ವಾರ್ಡ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭಕಲ್ಯಾಣ್ ಪರಿಶೀಲಿಸಿದರು
ಮಧುಗಿರಿ 15ನೇ ವಾರ್ಡ್‌ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭಕಲ್ಯಾಣ್ ಪರಿಶೀಲಿಸಿದರು   

ಮಧುಗಿರಿ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ಅಮೃತ -2.0 ಯೋಜನೆಯಡಿ ಮನೆ- ಮನೆಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ₹40 ಕೋಟಿ ವೆಚ್ಚದ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರಿಂದ ಬಂದ ದೂರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಶುಕ್ರವಾರ ಸ್ಥಳ ಪರಿಶೀಲಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಗುಣಮಟ್ಟದ ಕಾಮಗಾರಿ ಮಾಡುವಂತೆ ಸೂಚಿಸಿದರು.

15ನೇ ವಾರ್ಡ್‌ನಲ್ಲಿ ಯುಜಿಡಿ ಪೈಪ್‌ಲೈನ್ ಮತ್ತು ಅಮೃತ ಯೋಜನೆಯ ಪೈಪ್‌ಲೈನ್‌ಗಳು ಒಂದಕ್ಕೊಂದು ಸೇರಿಕೊಂಡಿದ್ದು, ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ADVERTISEMENT

ಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಿದಾಗ ಮುಂದಿನ ದಿನಗಳಲ್ಲಿ ಯುಜಿಡಿಯ ಪೈಪ್‌ಲೈನ್‌ನಲ್ಲಿ ಹಾದು ಹೋಗುವ ನೀರು ಮತ್ತು ಶುದ್ಧ ಕುಡಿಯುವ ನೀರು ಸೇರಿಕೊಳ್ಳುವ ಸಂಭವ ಇರುತ್ತದೆ. ಇಂತಹ ಸಮಸ್ಯೆಗಳನ್ನು ನೋಡಿಕೊಂಡು ಸರಿಯಾಗಿ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪುರಸಭೆ ಮುಖ್ಯ ಅಧಿಕಾರಿ ಸುರೇಶ್, ಇಂಜಿನಿಯರ್ ಜಿ.ಸಂಜೀವ್ ಮೂರ್ತಿ, ಪುರಸಭೆ ಮಾಜಿ ಸದಸ್ಯ ರಮೇಶ್ ಹಾಗೂ ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.