ADVERTISEMENT

ಚಿಕ್ಕನಾಯಕನಹಳ್ಳಿ | ಅಸ್ಪೃಶ್ಯತೆ ಆಚರಣೆ: ಹೋಟೆಲ್‌ ಮಾಲೀಕನಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2023, 15:30 IST
Last Updated 4 ನವೆಂಬರ್ 2023, 15:30 IST
   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಾತ್ರಿಕೆಹಾಳ್ ಗ್ರಾಮದ ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಣೆ ನಡೆದಿದೆ ಎಂಬ ದೂರಿನ ಮೇರೆಗೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ಪಿಎಸ್‌ಐ ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಹೋಟೆಲ್ ಮಾಲೀಕರಿಗೆ ಕಾನೂನು ತಿಳಿವಳಿಕೆ ನೀಡಿದ್ದಾರೆ.

ತಾಲ್ಲೂಕಿನ ಕಂದಿಕೆರೆ ಹೋಬಳಿ ತೀರ್ಥಪುರ ಗ್ರಾಮ ಪಂಚಾಯಿತಿ ಕಾತ್ರಿಕೆಹಾಳ್ ಗ್ರಾಮದ ಹೋಟೆಲ್‌ಗೆ ಉಪಾಹಾರ ಸೇವಿಸಲು ಹೋದಾಗ ಮಾಲೀಕರು ಪ್ರತ್ಯೇಕವಾಗಿ ಪ್ಲಾಸ್ಟಿಕ್ ತಟ್ಟೆ, ಲೋಟ ನೀಡಿ ಬೇರೆ ಜಾಗದಲ್ಲಿ ಕುಳಿತುಕೊಳ್ಳಲು ಹೇಳಿ ಅವಮಾನಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.

ಅಸ್ಪೃಶ್ಯತೆ ಆಚರಿಸಿದರೆ ಕಾನೂನು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೋಟೆಲ್ ಮಾಲೀಕ ಪ್ರತಿಕ್ರಿಯಿಸಿದ್ದಾರೆ.

ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಚಿಕ್ಕರಾಂಪುರ, ಚಂದ್ರಶೇಖರ್, ಕಾತ್ರಿಕೆಹಾಳ್ ಗೋವಿಂದರಾಜು, ತೀರ್ಥಪುರ ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.