
ತುಮಕೂರು: ‘ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ’ ಎಂದು ತುಮಕೂರು ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಹೊರ ವಲಯದ ಹೆಗ್ಗೆರೆಯಲ್ಲಿ ಶನಿವಾರ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭೆ ಚುನಾವಣೆ ಉಸ್ತುವಾರಿಯಾಗಿದ್ದ ಸಚಿವ ಜಿ.ಪರಮೇಶ್ವರ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಪರಮೇಶ್ವರ ಸಮ್ಮುಖದಲ್ಲೇ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಪರಮೇಶ್ವರ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಲೇ ‘ನನ್ನ ಗೆಲುವಿಗೆ ಕಾಂಗ್ರೆಸ್ ನಾಯಕರು ಕಾರಣರಾಗಿದ್ದಾರೆ’ ಎಂದರು. ಪಕ್ಕದಲ್ಲಿದ್ದ ಶಾಸಕ ಬಿ.ಸುರೇಶ್‌ಗೌಡ ‘ಡಿ.ಕೆ.ಶಿವಕುಮಾರ್ ಏನಾಗಬೇಕು?’ ಎಂದು ಕೇಳಿದರು. ‘ಆಮೇಲೆ ಮಾತನಾಡೋಣ, ಅದೆಲ್ಲ ಸೆಕೆಂಡರಿ. ಅವರ ನಡವಳಿಕೆಯೂ ಬೇಕಲ್ಲ’ ಎಂದು ಹೇಳುವ ಮೂಲಕ ವಿಷಯಾಂತರ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.