ತುರುವೇಕೆರೆ: ಪಟ್ಟಣದ ಆರ್ಯವೈಶ್ಯ ಮಂಡಳಿ, ವಾಸವಿ ಮಹಿಳಾ ಮಂಡಳಿ, ವಾಸವಿ ಯುವಜನ ಸಂಘ ಹಾಗೂ ಶ್ರೀನಿಧಿ ಭಜನಾ ಮಂಡಳಿಯಿಂದ ಶನಿವಾರ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ ಜಯಂತಿ ಆಚರಿಸಲಾಯಿತು.
ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಮೂರ್ತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಭಿಷೇಕ, ಲಲಿತ ಸಹಸ್ರನಾಮ ಪಾರಾಯಣ, ಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು. ನಾಂದಿ, ಗಂಗಾಪೂಜೆ, ಚಪ್ಪರ, ಪಂಚಾಮೃತಾಭಿಷೇಕ ಮಾಡಲಾಯಿತು.
ತಂಬಿಟ್ಟಿನ ಆರತಿ, ಹೋಮಾದಿ ನಡೆದು ಪೂರ್ಣಾಹುತಿ, ಮಂಗಳಾರತಿ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಹಿರಿಯ ದಂಪತಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ನಡೆಯಿತು. ಕನ್ನಿಕಾಪರಮೇಶ್ವರಿಯನ್ನು ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.