ತುಮಕೂರು: ಕೊರಟಗೆರೆ ತಾಲ್ಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಪತ್ರಿಕೆಯೊಂದು ವರದಿ ಪ್ರಕಟಿಸಿದೆ. ಇದರಿಂದ ಸ್ವಾಮೀಜಿ ಹಾಗೂ ಸಮಾಜದ ಘನತೆಗೆ ಚ್ಯುತಿ ಉಂಟಾಗಿದ್ದು ಪತ್ರಿಕೆ ಮತ್ತು ವರದಿಗಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವೀರಶೈವ/ಲಿಂಗಾಯತ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರಿಗೆ ಮನವಿ ಮಾಡಿತು.
ಸ್ವಾಮೀಜಿ ವಿರುದ್ಧದ ಆರೋಪ ಪೂರ್ಣ ಸುಳ್ಳು. ಸ್ವಾಮೀಜಿ ಹಾಗೂ ವೀರಶೈವ/ಲಿಂಗಾಯತ ಸಮಾಜದ ಬಗ್ಗೆ ಮಾನಹಾನಿ ಆಗುವ ರೀತಿ ವರದಿ ಪ್ರಕಟಿಸಿದ ಸಂಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.