ಮಧುಗಿರಿ: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಕರಡಿ ಮೃತಪಟ್ಟಿರುವ ಘಟನೆ ತಾಲ್ಲೂಕು ಕಸಬಾ ವ್ಯಾಪ್ತಿಯ ಜಡಗೊಂಡನಹಳ್ಳಿ ಗ್ರಾಮದ ಸಮೀಪ ಶನಿವಾರ ಮುಂಜಾನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಶವದ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯ ಸಂಸ್ಕಾರ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.