ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರು ಸಮೀಪದ ಕ್ಯಾತ್ಸಂದ್ರದ ಬಳಿ ಸೋಮವಾರ ರಾತ್ರಿ ನಡೆದಿದೆ.
ಚಿರತೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದೆ ಎನ್ನಲಾಗಿದೆ. ಬಿ.ಎಚ್.ರಸ್ತೆ ಜಾಸ್ ಟೋಲ್‌ಗೇಟ್ ಬಳಿ ರಸ್ತೆ ದಾಟುವ ಸಮಯದಲ್ಲಿ ವಾಹನ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದೆ.
ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅಧಿಕಾರಿಗಳು, ಚಿರತೆ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಮಂಗಳವಾರ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.