ADVERTISEMENT

ತುಮಕೂರು: ಕೊರೊನಾ ಜನಜಾಗೃತಿ, ಸೋಪ್, ಕರಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 14:01 IST
Last Updated 1 ಏಪ್ರಿಲ್ 2020, 14:01 IST
ಕರಪತ್ರ ಹಾಗೂ ಸೋಪ್‌ಗಳ ವಿತರಣೆಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಚಾಲನೆ ನೀಡಿದರು
ಕರಪತ್ರ ಹಾಗೂ ಸೋಪ್‌ಗಳ ವಿತರಣೆಗೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಚಾಲನೆ ನೀಡಿದರು   

ತುಮಕೂರು: ವಿಪ್ರೊ ಎಂಟರ್ ಪ್ರೈಸಸ್ ಸಂಸ್ಥೆಯು ಕೊರೊನಾ ಸೋಂಕಿನ ಕುರಿತು ಜನಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ 5 ಲಕ್ಷ ಕರಪತ್ರ ಹಾಗೂ ಪ್ರತಿ ಮನೆಗೆ ಎರಡು ಸೋಪ್‌ಗಳನ್ನು ಉಚಿತವಾಗಿ ವಿತರಿಸಲು ಮುಂದಾಗಿದೆ.

ಈ ವಿತರಣೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಚಾಲನೆ ನೀಡಿದರು. ಸಂಸ್ಥೆಯು ವೈಯಕ್ತಿಕ ಸ್ವಚ್ಛತೆಗೆ ಮತ್ತು ಅರಿವು ಚಟುವಟಿಕೆಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಸಂಸ್ಥೆಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‍ಆರ್) ನಿಧಿಯಿಂದ ಈ ಚಟುವಟಿಕೆ ಹಮ್ಮಿಕೊಂಡಿದೆ ಎಂದರು.

ಜಿಲ್ಲೆಯ ಜನರು ಸೋಂಕು ಕುರಿತು ಭಯಪಡುವುದು ಬೇಡ. ಜನರು ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾಕಲ್ಯಾಣ್, ಉಪಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್, ವಿಪ್ರೊ ಸಂಸ್ಥೆ ತುಮಕೂರು ಘಟಕದ ಹಿರಿಯ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ್, ಸಿಬ್ಬಂದಿ ವಿಭಾಗದ ವ್ಯವಸ್ಥಾಪಕ ಎಸ್.ಹನುಮಂತರಾಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.