ADVERTISEMENT

ವಾಲಿಬಾಲ್: ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ ಪ್ರಥಮ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 4:41 IST
Last Updated 9 ಅಕ್ಟೋಬರ್ 2024, 4:41 IST
ಮಧುಗಿರಿಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಾಮನಗರ ಜಿಲ್ಲೆ ತಂಡ
ಮಧುಗಿರಿಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ರಾಮನಗರ ಜಿಲ್ಲೆ ತಂಡ   

ಮಧುಗಿರಿ: ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೆಂಗಳೂರು ವಿಭಾಗ ಮಟ್ಟದ 14ರಿಂದ 17 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯ ಮಂಗಳವಾರ ನಡೆಯಿತು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳ 15 ತಂಡಗಳು ಭಾಗವಹಿಸಿದ್ದವು.

17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಾಮನಗರ ಜಿಲ್ಲೆ ಪ್ರಥಮ, ದಾವಣಗೆರೆ ದ್ವೀತಿಯ ಸ್ಥಾನ ಪಡೆಯಿತು.

ADVERTISEMENT

ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಪ್ರಥಮ ಮತ್ತು ರಾಮನಗರ ಜಿಲ್ಲೆ ದ್ವಿತೀಯ ಸ್ಥಾನ ಪಡೆಯಿತು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಂಗಳೂರು ಉತ್ತರ ಜಿಲ್ಲೆ ಪ್ರಥಮ, ರಾಮನಗರ ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಪ್ರಥಮ, ಶಿವಮೊಗ್ಗ ದ್ವಿತೀಯ ಸ್ಥಾನ ಪಡೆದವು.

ಬಿಇಒ ಹನುಮಂತರಾಯಪ್ಪ ವಿಜೇತ ತಂಡಗಳಿಗೆ ಟ್ರೋಫಿ ವಿತರಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಎಂ. ಶೆಟ್ಟಿಮಣಿ, ಪ್ರಭಾರ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಯರಗಾಮಯ್ಯ, ಅಂತರರಾಷ್ಟ್ರೀಯ ಅಥ್ಲೆಟಿಕ್ ತೀರ್ಪುಗಾರ ಹಾಗೂ ನಿವೃತ್ತ ದೈಹಿಕ ಶಿಕ್ಷಕ ಆಂಜನೇಯಲು, ದೈಹಿಕ ಶಿಕ್ಷಣ ಶಿಕ್ಷಕರಾದ ಮೀನಾಕ್ಷಿ, ಗುರುರಾಜ್, ವೆಂಕಟರವಣಪ್ಪ, ಶ್ರೀನಿವಾಸ್‌ ಹಾಜರಿದ್ದರು.

ಮಧುಗಿರಿಯಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಬೆಂಗಳೂರು ದಕ್ಷಿಣ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.