ತಿಪಟೂರು: ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಫೆ.13 ರಿಂದ 16ರ ವರೆಗೆ ನಗರದ ಕಲ್ಪತರು ಕ್ರೀಡಾಂಗಣದಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ.
‘13ರಂದು ಸಂಜೆ 6 ಗಂಟೆಗೆ ಶಾಸಕ ಕೆ.ಷಡಕ್ಷರಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಲಿದ್ದಾರೆ. 16 ರಂದು ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಎಂದು ಸಂಘದ ಸದಸ್ಯ ನವೀನ್‌ಕುಮಾರ್ ಇಲ್ಲಿ ಸೋಮವಾರ ತಿಳಿಸಿದರು.
ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಂದ್ಯಗಳ ವೀಕ್ಷಣೆಗೆ 3 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನೆ ದಿನ ಬೆಳಿಗ್ಗೆ 9 ಗಂಟೆಗೆ ನಗರದ ಕೆಂಪಮ್ಮ ದೇವಿ ದೇವಸ್ಥಾನದಿಂದ ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ಜಾನಪದ ಕಲಾತಂಡಗಳು ಮೆರುಗು ನೀಡಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮುಖಂಡರಾದ ನಿಜಗುಣ, ಮಾದಿಹಳ್ಳಿ ರೇಣು, ವಿಜಯ್‌ಕುಮಾರ್, ಸಿದ್ದರಾಮಣ್ಣ, ಸಂಗಮೇಶ್ ಕಳ್ಳಿಹಾಳ್, ತೋಂಟಾರಾಧ್ಯ, ಓಹಿಲಾ ಗಂಗಾಧರ್, ಹೇಮಂತ್, ನಂಜೆಗೌಡ, ಉದಯ್‌ಶಂಕರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.