ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರ ಉಜ್ಜನಕುಂಟೆ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆರು ಜನ ಗಾಯಗೊಂಡಿದ್ದಾರೆ.
ಸುಗುಣ ಟ್ರಾವೆಲ್ಸ್ ಬಸ್ಸಿಗೆ ಹಿಂದಿನಿಂದ ಬಂದ ವಿಆರ್‌ಎಲ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿರುವ ಆರು ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.