ADVERTISEMENT

‘ಪ್ರಾಮಾಣಿಕತೆ ಬದುಕಿನ ಅಂಗವಾಗಲಿ’

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 13:55 IST
Last Updated 28 ಅಕ್ಟೋಬರ್ 2019, 13:55 IST
ಕಾರ್ಯಕ್ರಮದಲ್ಲಿ ವೈ.ಎಸ್.ಸಿದ್ದೇಗೌಡ ಮಾತನಾಡಿದರು
ಕಾರ್ಯಕ್ರಮದಲ್ಲಿ ವೈ.ಎಸ್.ಸಿದ್ದೇಗೌಡ ಮಾತನಾಡಿದರು   

ತುಮಕೂರು: ಪ್ರಾಮಾಣಿಕತೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಮಾತಿಗೂ ಕೃತಿಗೂ ಸಂಬಂಧ ಇರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ತಿಳಿಸಿದರು.

ವಿಶ್ವವಿದ್ಯಾನಿಲಯವು ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಜಾಗೃತಿ ಅರಿವು ಸಪ್ತಾಹ’ದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಪ್ರಾಮಾಣಿಕತೆ ಹಾಗೂ ಸಮಗ್ರತೆ ಇಲ್ಲದ ಬದುಕು ವ್ಯರ್ಥ. ಸ್ವಚ್ಛ ಪರಿಸರದ ಜತೆಗೆ ಸ್ವಚ್ಛ ಸಮಾಜದ ನಿರ್ಮಾಣವೂ ಆಗಬೇಕು. ಈ ದಿಕ್ಕಿನಲ್ಲಿ ಭ್ರಷ್ಟಾಚಾರ ತೊಲಗಬೇಕು ಎಂದರು.

ADVERTISEMENT

ಸಮಾಜದಲ್ಲಿ ಮೌಲ್ಯಗಳು ಅವನತಿಯತ್ತ ಸಾಗುತ್ತಿವೆ. ಲಂಚ ಕೊಡುವುದು, ಪಡೆಯುವುದು ಎರಡೂ ತಪ್ಪು ಎಂಬ ಅರಿವು ಸಮಾಜದಲ್ಲಿ ಮೂಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಕೆಲಸವನ್ನು ಅನಗತ್ಯವಾಗಿ ಮುಂದೂಡುವುದೂ ಭ್ರಷ್ಟಾಚಾರದ ಒಂದು ಭಾಗ ಎಂದು ಹೇಳಿದರು.

ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಜೆ.ಸುರೇಶ್, ಹಣಕಾಸು ಅಧಿಕಾರಿ ಪ್ರೊ.ಪಿ.ಪರಮಶಿವಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.