
ಪ್ರಜಾವಾಣಿ ವಾರ್ತೆತುಮಕೂರು: ವಿಶ್ವವಿದ್ಯಾಲಯವು ಮೌಲ್ಯಮಾಪನ ಪೂರ್ಣಗೊಂಡ 24 ಗಂಟೆಗಳ ಅವಧಿಯಲ್ಲಿಯೇ ಪದವಿಯ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.
ಬಿಸಿಎ 6ನೇ ಸೆಮಿಸ್ಟರ್ ಪರೀಕ್ಷೆಗಳು ಈಚೆಗೆ ಮುಗಿದಿದ್ದು, ಸೆ. 25ರಂದು ಮೌಲ್ಯಮಾಪನ ಕಾರ್ಯವೂ ಪೂರ್ಣಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ. 26ರಂದೇ ಫಲಿತಾಂಶ ಪ್ರಕಟಿಸಲಾಗಿದೆ.
ಇತರೆ ವಿಷಯಗಳ ಮೌಲ್ಯಮಾಪನ ಕಾರ್ಯ ಭರದಿಂದ ಸಾಗುತ್ತಿದೆ. ಶೀಘ್ರದಲ್ಲಿಯೇ ಅಂತಿಮ ವರ್ಷದ ಪದವಿಯ ಎಲ್ಲ ವಿಷಯಗಳ ಫಲಿತಾಂಶ ಪ್ರಕಟಿಸಲು ವಿಶ್ವವಿದ್ಯಾಲಯ ಮುಂದಾಗಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‍ಸೈಟ್ www.tumkuruniversity.ac.in ಮೂಲಕ ಫಲಿತಾಂಶ ನೋಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.