ತುಮಕೂರು: ನಗರ ಪ್ರದೇಶದಲ್ಲಿ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಬೀಳುತ್ತಿಲ್ಲ. ನಗರದ ಮೆಳೆ ಫ್ಯಾಕ್ಟರಿ ಬಳಿಯ ಗೋದಾಮಿನಲ್ಲಿ ಶನಿವಾರ ಬೆಳಗಿನ ಜಾವ ಕಳ್ಳತನವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳುವಾಗಿವೆ.
ಲತೇಶ್ ಎಂಬುವರಿಗೆ ಸೇರಿದ ಬಸವೇಶ್ವರ ಟ್ರೇಡರ್ಸ್ ಗೋದಾಮಿಗೆ ನುಗ್ಗಿದ ಕಳ್ಳರು ಮೋಟರ್ ಪೈಪ್, ವೈರ್, ಪಂಪ್, ಕಪ್ಲಿಂಗ್, ನಲ್ಲಿ ಸಾಮಗ್ರಿ ಕಳವು ಮಾಡಿದ್ದಾರೆ.
ಗೋದಾಮಿನ ಹಿಂಭಾಗದ ಶೀಟ್ ಒಡೆದು ಒಳ ನುಗ್ಗಿರುವ ಕಳ್ಳರು ಕೈಚಳಕ ತೋರಿದ್ದಾರೆ. ಬೆಳಿಗ್ಗೆ ಕೆಲಸಗಾರರು ಬಂದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.