ಶಿರಾ: ತಾಲ್ಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಿಗನಹಟ್ಟಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಿರೋಧಿಸಿ ಗ್ರಾಮಸ್ಥರು ಸೋಮವಾರ ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮೇಣಿಗನಹಟ್ಟಿ ಗ್ರಾಮಸ್ಥರು ಎರಡು ಕಿ.ಮೀ ದೂರದ ಹುಣಸೆಕಟ್ಟೆ ಗ್ರಾಮಕ್ಕೆ ಹೋಗಿ ನೀರು ತರಬೇಕು. ಇಲ್ಲದಿದ್ದರೆ ಖಾಸಗಿಯವರ ತೋಟಗಳ ಬಳಿ ಹೋಗಿ ನೀರಿಗಾಗಿ ಅಂಗಲಾಚಬೇಕಾದ ಸ್ಥಿತಿ ಇದೆ ಎಂದು ಗ್ರಾಮಸ್ಥರು ದೂರಿದರು.
ಗ್ರಾಮದಲ್ಲಿನ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗ್ರಾಮಕ್ಕೆ ಭೇಟಿ ನೀಡಿ ನೀರಿನ ಬವಣೆಯನ್ನು ಅರಿತು ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದರು. ಈಗ ಮತ್ತೆ ನೀರಿನ ಸಮಸ್ಯೆ ಬಿಗಡಾಯಿಸಿದೆ. ಈ ಬಗ್ಗೆ ಗ್ರಾ.ಪಂ ಪಿಡಿಒ ಮಹಮ್ಮದ್ ಕೌಸರ್ ಅವರಿಗೆ ಹಲವು ಬಾರಿ ಮನವಿ ಮಾಡಿಕೊಂಡರು ಕ್ರಮ ಕೈಗೊಂಡಿಲ್ಲ. ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಿಡಿಒಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.