ತುಮಕೂರು:ನಗರಕ್ಕೆ ದಿನದ 24 ಗಂಟೆಗಳೂ ಕುಡಿಯುವ ನೀರು ಪೂರೈಕೆ ಮಾಡುವಯೋಜನೆ ಕಾಮಗಾರಿ ಆರು ತಿಂಗಳಲ್ಲಿಪೂರ್ಣಗೊಳ್ಳಲಿದೆ. ನೀರು ಶುದ್ಧೀಕರಣ ಘಟಕದಿಂದ ನೇರವಾಗಿ ನೀರು ಪೂರೈಸಲಾಗುವುದು ಎಂದು ಶಾಸಕ ಬಿ.ಜಿ.ಜ್ಯೋತಿಗಣೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘₹ 196 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈಗಾಗಲೇ 2 ವಾರ್ಡ್‍ಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಶೇ 90ರಷ್ಟು ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ’ ಎಂದರು.
44 ಓವರ್‌ಹೆಡ್ ಟ್ಯಾಂಕ್‌ಗಳನ್ನು ತುಂಬಿಸಿ ಅಲ್ಲಿಂದ ವಾಲ್‍ಮೆನ್‍ಗಳ ಸಹಾಯವಿಲ್ಲದೆ ನೀರು ಹರಿಸಲಾಗುವುದು. ಈ ಯೋಜನೆಯಿಂದ ಮುಂದಿನ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಅಗತ್ಯ ಇಲ್ಲದಂತೆ ಆಗುತ್ತದೆ. ಪಾಲಿಕೆ ಎಂಜಿನಿಯರ್‌ಗಳು ಈ ಬಗ್ಗೆ ನಿಗಾವಹಿಸಬೇಕು ಎಂದರು.
ಸ್ಮಾರ್ಟ್‍ಸಿಟಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡಾ ಸಂಕೀರ್ಣ, ಅಂಗನವಾಡಿ, ಅಮಾನಿಕೆರೆಯ ಗಾಜಿನ ಮನೆ ಪಕ್ಕದಲ್ಲಿ ತುಮಕೂರು ಸಿಟಿ ಸಂತೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಮುಖಂಡ ವೇದಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.