ADVERTISEMENT

ವರದಕ್ಷಿಣೆ ಕಿರುಕುಳ; ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 15:14 IST
Last Updated 27 ಏಪ್ರಿಲ್ 2020, 15:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ವರದಕ್ಷಿಣಿ ಕಿರುಕುಳ ತಾಳದೆ ತಾಲ್ಲೂಕಿನ ತೊಂಡೆಗೆರೆಯ ಗೌರಮ್ಮ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರಟಗೆರೆ ತಾಲ್ಲೂಕು ಎಲೆರಾಂಪುರದ ಗೌರಮ್ಮ ಅವರನ್ನು ತೊಂಡೆಗೆರೆಯ ಕುಮಾರ್ ಎಂಬುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ವರದಕ್ಷಿಣಿ ಹಣ ತರುವಂತೆ ಕುಮಾರ್ ಹಾಗೂ ಅವರ ಪೋಷಕರು ಒತ್ತಾಯಿಸುತ್ತಿದ್ದರು. ಇದರಿಂದ ಮನನೊಂದು ಗೌರಮ್ಮ ಭಾನುವಾರ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಸೋಮವಾರ ಮೃತಪಟ್ಟರು. ತುಮಕೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕುಮಾರ್ ಹಾಗೂ ಅವರ ಪೋಷಕರ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.