ADVERTISEMENT

ಅರೆಬೆಂದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 14:01 IST
Last Updated 27 ಡಿಸೆಂಬರ್ 2019, 14:01 IST

ತುಮಕೂರು: ತುಮಕೂರು ತಾಲ್ಲೂಕಿನ ನೆಲಹಾಳ ಗ್ರಾಮದ ನಿರ್ಜನ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

ಶವದ ಎದೆಭಾಗ, ಕಾಲುಗಳನ್ನು ನಾಯಿಗಳು ಕಿತ್ತು ತಿಂದಿವೆ.

ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ, ಇಲ್ಲಿಗೆ ತಂದು ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಶವದ ಗುರುತು ಇನ್ನೂ ಸಿಕ್ಕಿಲ್ಲ.

ADVERTISEMENT

ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೋರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.