ADVERTISEMENT

ಬಸ್‌ನಿಂದ ಇಳಿಯುತ್ತಿದ್ದಾಗ ಲಾರಿ ಗುದ್ದಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 12:20 IST
Last Updated 30 ಸೆಪ್ಟೆಂಬರ್ 2022, 12:20 IST
   

ತುಮಕೂರು: ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದಲ್ಲಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಂದ್ರಮ್ಮ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ದೊಡ್ಡ ಅಗ್ರಹಾರ ಗ್ರಾಮದ ಚಂದ್ರಮ್ಮ ಹಾಗೂ ಪತಿ ರಂಗಶ್ವಾಮಯ್ಯ ತುಮಕೂರು ಕಡೆಯಿಂದ ಬಂದ ಕೆಎಸ್ಆರ್‌ಟಿಸಿ ಬಸ್‌ನಿಂದ ಕಳ್ಳಂಬೆಳ್ಳದಲ್ಲಿ ಇಳಿಯುತ್ತಿದ್ದ ಸಮಯದಲ್ಲಿ ಹಿಂದಿನಿಂದ ಅತಿವೇಗವಾಗಿ ಬಂದ ಲಾರಿ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಯ ಪಕ್ಕದಲ್ಲಿದ್ದ ಚಂದ್ರಮ್ಮ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ರಂಗಶ್ವಾಮಯ್ಯ ಅವರಿಗೆ ಕಳ್ಳಂಬೆಳ್ಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT