ADVERTISEMENT

ತುಮಕೂರು: ಹೆರಿಗೆ ವೇಳೆ ಬಾಣಂತಿ ಸಾವು, ಆಸ್ಪತ್ರೆ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 6:59 IST
Last Updated 30 ಜುಲೈ 2022, 6:59 IST
ಕುಣಿಗಲ್‌ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಕುಣಿಗಲ್‌ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.   

ತುಮಕೂರು: ಹೆರಿಗೆ ಸಮಯದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಹಿಳೆಯ ಶವವಿಟ್ಟು ಕುಣಿಗಲ್‌ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಅವರ ಕುಟುಂಬಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ತೆರೆದಕೊಪ್ಪೆ ಗ್ರಾಮದ ಪಲ್ಲವಿ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಸಮಯದಲ್ಲಿ ಹಾಗೂ ನಂತರ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ, ಮಹಿಳೆಯ ಸಾವಿಗೆ ಕಾರಣರಾಗಿದ್ದಾರೆ. ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಹರೀಶ್‌ಬಾಬು ಮತ್ತು ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್‌ಬಾಬು ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು.

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮೂರು ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಗೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು.

ADVERTISEMENT

ಶಾಸಕ ಡಾ.ರಂಗನಾಥ ಮಾತನಾಡಿ ‘ಸರ್ಕಾರದ ವೈಫಲ್ಯದಿಂದ ಮಹಿಳೆ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಹೀಗಾಗಿ ಇಂತಹ ಅನಾಹುತಗಳು ನಡೆಯುತ್ತಿವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚೆತ್ತುಕೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.