ಪಾವಗಡ: ಮಹಿಳೆಯರು ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಜೆಡಿಎಸ್ ಘಟಕ ಆಯೋಜಿಸಿದ್ದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು. ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು. ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಗಣನೀಯ. ಈ ನಿಟ್ಟಿನಲ್ಲಿ ಯುವತಿಯರು, ಸ್ತ್ರೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ತಾಲೂಕಿನ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗಿದ್ದ ಕಾಳಜಿಯಿಂದಾಗಿ ತಾಲೂಕಿನಲ್ಲಿರುವ ಸರ್ಕಾರಿ ಬಸ್ ಡಿಪೊ ಆರಂಭವಾಗಿದೆ. ಸಾಕಷ್ಟು ಮೊರಾರ್ಜಿ ವಸತಿ ಶಾಲೆಗಳು ಮಂಜೂರಾಗಿವೆ ಎಂದರು.
ಜನರು ಕಾಂಗ್ರೆಸ್ ಸರ್ಕಾರದ ಬಗ್ಗೆ ಬೇಸರ ಹೊಂದಿದ್ದು, ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಜೆಡಿಎಸ್, ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ. ಅಂಜಿನಪ್ಪ , ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಜೆಡಿಎಸ್ ಬಲಪಡಿಸಬೇಕು ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ರಶ್ಮಿಕ, ಮಾಜಿ ಎಂಎಲ್ ಸಿ ತಿಪ್ಪೇಸ್ವಾಮಿ, ತಾಹಿರಾಬಾನು, ಪ್ರಧಾನ ಕಾರ್ಯದರ್ಶಿ ಸೊಗಡು ವಿ ವೆಂಕಟೇಶ್, ಮನು ಮಹೇಶ್, ಅಕ್ಕಲಪ್ಪ ನಾಯ್ಡು, ತಾಲೂಕು ಅಧ್ಯಕ್ಷ ಎನ್ ಎ ಈರಣ್ಣ, ಗೌರವಾಧ್ಯಕ್ಷ ರಾಜಶೇಖರಪ್ಪ, ಕೊತ್ತೂರ್ ನಾಗೇಶ್, ಬಲರಾಮರೆಡ್ಡಿ, ಶಿವಕುಮಾರ್, ಗಂಗಾಧರನಾಯ್ಡು, ಭರತ್ ಕುಮಾರ್, ಗೋವಿಂದಪ್ಪ, ತಿಮ್ಮಾರೆಡ್ಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Quote - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಲದಲ್ಲಿ ಪಾವಗಡ ತಾಲ್ಲೂಕಿಗೆ ಆದ್ಯತೆ ನೀಡಲಾಗಿತ್ತು. ತಾಲ್ಲೂಕಿನಲ್ಲಿ 10ಕ್ಕೂ ಹೆಚ್ಚು ಪ್ರೌಢ ಶಾಲೆ ಕೆಎಸ್‌ಆರ್‌ಟಿಸಿ ಘಟಕ ಆರಂಭಿಸಲಾಗಿತ್ತು ಕೆ.ಎಂ. ತಿಮ್ಮರಾಯಪ್ಪ ಮಾಜಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.