ADVERTISEMENT

ತುಮಕೂರು | ಗುಡಿಸಲು ವಾಸ: ಮಹಿಳಾ ಆಯೋಗ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 6:35 IST
Last Updated 23 ಜುಲೈ 2025, 6:35 IST
ತುಮಕೂರು ತಾಲ್ಲೂಕಿನ ಸೀನಪ್ಪನಹಳ್ಳಿ ಜನತಾ ಕಾಲೊನಿಗೆ ಸೋಮವಾರ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಪರಿಶೀಲಿಸಿದರು
ತುಮಕೂರು ತಾಲ್ಲೂಕಿನ ಸೀನಪ್ಪನಹಳ್ಳಿ ಜನತಾ ಕಾಲೊನಿಗೆ ಸೋಮವಾರ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಪರಿಶೀಲಿಸಿದರು   

ತುಮಕೂರು: ತಾಲ್ಲೂಕಿನ ಸೀನಪ್ಪನಹಳ್ಳಿ ಜನತಾ ಕಾಲೊನಿಯಲ್ಲಿ ಜನರು ಮನೆ ಇಲ್ಲದೆ ಇನ್ನೂ ಗುಡಿಸಲಿನಲ್ಲಿ ವಾಸಿಸುತ್ತಿರುವುದಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅಸಮಾಧಾನ ವ್ಯಕ್ತಪಡಿಸಿದರು.

ಸೀನಪ್ಪನಹಳ್ಳಿ ಜನತಾ ಕಾಲೊನಿಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಮಹಿಳೆಯರು ಹೊರಗಡೆ ಬಟ್ಟೆ ಕಟ್ಟಿಕೊಂಡು ಮರೆಯಲ್ಲಿ ಸ್ನಾನ ಮಾಡುತ್ತಿರುವುದು ಶೋಚನೀಯ. ಕೂಡಲೇ ನಿವೇಶನ ಮಂಜೂರು ಮಾಡಿ ಆಶ್ರಯ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಿರಿವರ, ನಾಗವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಿಬ್ಬಂದಿ ಕೊರತೆ ಬಗ್ಗೆ ಮಾಹಿತಿ
ಪಡೆದುಕೊಂಡರು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ADVERTISEMENT

ಇದಕ್ಕೂ ಮುನ್ನ ತಾಲ್ಲೂಕಿನ ರಾಯಪುರ ಗ್ರಾಮದಲ್ಲಿ ಸಾಯಿ ಸೇವಾಶ್ರಮ ಸೇವಾ ಸಂಸ್ಥೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದರು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳ ನೆರವಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯವಾಣಿ 1098, 112 ಮತ್ತು 181ರ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು. ಇಂತಹ ಸಂದರ್ಭದಲ್ಲಿ ಮಹಿಳಾ ಸಾಂತ್ವನ ಕೇಂದ್ರಗಳ ನೆರವು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ನಾಗವಲ್ಲಿ– ಲಕ್ಕೇನಹಳ್ಳಿಯ ಸ್ಫೂರ್ತಿಧಾಮ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.