ADVERTISEMENT

ಮಧುಗಿರಿ: ಜನೋತ್ಸವ ಯಶಸ್ಸಿಗೆ ಶ್ರಮಿಸಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 5:12 IST
Last Updated 6 ಸೆಪ್ಟೆಂಬರ್ 2022, 5:12 IST
ಕೋರ ಹೋಬಳಿಯ ಕೆಸ್ತೂರು ಗ್ರಾಮದ ನೇತಾಜಿ ಬ್ರಿಗೇಡ್ ಯುವಕರ ತಂಡದಿಂದ ಪ್ರತಿಷ್ಠಾಪಿಸಿದ್ದ ಗಣೇಶೋತ್ಸವದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು
ಕೋರ ಹೋಬಳಿಯ ಕೆಸ್ತೂರು ಗ್ರಾಮದ ನೇತಾಜಿ ಬ್ರಿಗೇಡ್ ಯುವಕರ ತಂಡದಿಂದ ಪ್ರತಿಷ್ಠಾಪಿಸಿದ್ದ ಗಣೇಶೋತ್ಸವದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು   

ಮಧುಗಿರಿ: ‘ಸೆ. 8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಕೆ. ಮಂಜುನಾಥ್ ತಿಳಿಸಿದರು.

ಪಟ್ಟಣದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಜನಪರ ಯೋಜನೆಗಳ ಬಗ್ಗೆ ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ 7 ಕಡೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ನಡೆಯುವ ಮೊದಲ ಜನೋತ್ಸವ ಕಾರ್ಯಕ್ರಮಕ್ಕೆ ಮಧುಗಿರಿ ಭಾಗದಿಂದ 18 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ADVERTISEMENT

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜ, ಜಯಣ್ಣ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಿಪತಿ, ವಿಜಯಕುಮಾರ್, ಕಾರ್ಯದರ್ಶಿ ಲತಾ ಪ್ರದೀಪ್, ತಾಲ್ಲೂಕು ಮಂಡಲ ಅಧ್ಯಕ್ಷ ಪಿ.ಎಲ್. ನರಸಿಂಹಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.