ADVERTISEMENT

ತುಮಕೂರು: ಬಂಡೆ ಸಿಡಿಸುವಾಗ ಗುಡ್ಡ ಕುಸಿದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 6:28 IST
Last Updated 2 ಜುಲೈ 2025, 6:28 IST
ಘಟನೆ ನಡೆದ ಸ್ಥಳ
ಘಟನೆ ನಡೆದ ಸ್ಥಳ   

ಕೊರಟಗೆರೆ: ತಾಲ್ಲೂಕಿನ ಜಟ್ಟಿ ಅಗ್ರಹಾರ ಬಳಿಯ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಂಡೆ ಸಿಡಿಸುವಾಗ ಗುಡ್ಡ ಕುಸಿದು ಕಾರ್ಮಿಕ ಮಧ್ಯಪ್ರದೇಶದ ಡಾಲ್ಮಾನ್(25) ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ ಕ್ರಷರ್‌ನಲ್ಲಿ ಕೆಲಸ ಮಾಡುವಾಗ ಏಕಾಏಕಿ ಗುಡ್ಡ ಕುಸಿದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕ್ರಷರ್ ಸ್ಥಳ ಅಪಾಯಕಾರಿಯಾಗಿದ್ದು, ಕಾರ್ಮಿಕರಿಗೆ ಯಾವುದೇ ಭದ್ರತಾ ಕ್ರಮ ಕೈಗೊಳ್ಳದ ಕಾರಣ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ADVERTISEMENT

ಜಟ್ಟಿ ಅಗ್ರಹಾರ ಸುತ್ತಮುತ್ತ ಮೂರು ಕ್ರಷರ್‌ಗಳು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಕ್ರಷರ್ ಕೆಲಸಕ್ಕಾಗಿ ಮಧ್ಯಪ್ರದೇಶ, ರಾಜಸ್ಥಾನ ಇತರೆಡೆಗಳಿಂದ ಕಾರ್ಮಿಕರನ್ನು ಕರೆಸಲಾಗುತ್ತದೆ. ಕಾರ್ಮಿಕರಿಗೆ ಯಾವುದೇ ಭದ್ರತೆ ಇಲ್ಲದ ಕಾರಣ ಆಗ್ಗಾಗ್ಗೆ ಸಾವು ಸಂಭವಿಸುತ್ತಲೇ ಇರುತ್ತದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.