ADVERTISEMENT

ಅಂತರ್ಜಲ ಮರುಪೂರಣ: ರೈತರಿಗೆ ಲಾಭ

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:27 IST
Last Updated 20 ಮೇ 2020, 14:27 IST

ತುಮಕೂರು: ಅಂತರ್ಜಲ ಮರುಪೂರಣದಿಂದ ರೈತರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ನಿರ್ದೇಶಕ ರವೀಂದ್ರ ದೇಸಾಯಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಅಂತರ್ಜಲ ಚೇತನ ಯೋಜನೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಅಂತರ್ಜಲ ಯೋಜನೆಯು ರಾಜ್ಯ ಸರ್ಕಾರದ ಮಹತ್ವದ ಯೋಜನೆ. ಈ ಯೋಜನೆಯನ್ನು ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಅದೇ ರೀತಿ ಕೊರಟಗೆರೆ, ಗುಬ್ಬಿ, ತುಮಕೂರು, ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ 68 ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ADVERTISEMENT

ನದಿ ಮೂಲಗಳ ಆರಂಭ ಹಾಗೂ ಅಂತ್ಯ ಗಮನದಲ್ಲಿ ಇಟ್ಟುಕೊಂಡು ನರೇಗಾ ಯೋಜನೆಯಡಿ ಅಂತರ್ಜಲ ಚೇತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ರೈತರ ಸಮಸ್ಯೆಗಳು ಮತ್ತು ಅಧಿಕಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

my app ಅಪ್ಲಿಕೇಷನ್ ಡೌನ್‍ಲೋಡ್ ಮಾಡಿಕೊಂಡು ಇದರ ಮೂಲಕ ನದಿ ಮೂಲಗಳ ಪ್ರಾರಂಭ ಹಾಗೂ ಅಂತ್ಯದ ಬಗ್ಗೆ ನಿಖರವಾದ ಮಾಹಿತಿ ತಿಳಿಯಬಹುದು ಎಂದರು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಮಹೇಶ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಯೋಜನಾ ಎಂಜಿನಿಯರ್ ಜಿ.ಆರ್.ಶ್ರೀನಿವಾಸ್, ಜಿಲ್ಲೆಯ ಐದು ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.