ತುಮಕೂರು: ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಹಾಗೂ ಸಿದ್ಧಗಂಗಾ ಪದವಿ ಕಾಲೇಜು ವತಿಯಿಂದ ‘ಕೃತಕ ಬುದ್ಧಮತ್ತೆ' ಕುರಿತು ಸೆ.26 ಹಾಗೂ 27ರಂದು ಎರಡು ದಿನಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ ಇಲ್ಲಿ ಬುಧವಾರ ತಿಳಿಸಿದರು.
‘ಕೃತಕ ಬುದ್ಧಿಮತ್ತೆ ಹಾಗೂ ಮಷಿನ್ ಲರ್ನಿಂಗ್’ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿ, ಮುಂದಿನ ಸವಾಲುಗಳು, ಭವಿಷ್ಯದಲ್ಲಿ ಸಮಾಜಕ್ಕೆ ಯಾವ ರೀತಿಯಲ್ಲಿ ಉಪಯುಕ್ತ ಆಗಬಲ್ಲದು ಎಂಬ ಬಗ್ಗೆ ಸಂಶೋಧಕರು, ಶಿಕ್ಷಣ ತಜ್ಞರು, ಉದ್ಯಮಿಗಳು ಚರ್ಚೆ ನಡೆಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಐದು ಸಮಾನಾಂತರ ವೇದಿಕೆಗಳಲ್ಲಿ ನಿರ್ದಿಷ್ಟ ಕ್ಷೇತ್ರಗಳ ಬಗ್ಗೆ ಲೇಖನಗಳು ಮಂಡನೆಯಾಗಲಿವೆ. ಗುಣಮಟ್ಟದ ಲೇಖನಗಳನ್ನು ಆಯ್ಕೆ ಮಾಡಿಕೊಂಡು, ಜರ್ನಲ್‍ನಲ್ಲಿ ಪ್ರಕಟಿಸಲಾಗುವುದು. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ನಿರ್ದೇಶಕ ಎಸ್.ಆರ್.ಮಹದೇವ ಪ್ರಸನ್ನ ಸಮ್ಮೇಳನ ಉದ್ಘಾಟಿಸುವರು. ತಾಂತ್ರಿಕ ಶಿಕ್ಷಣ ಪರಿಷತ್ ಸಲಹೆಗಾರ ಎನ್.ಎಚ್.ಸಿದ್ದಲಿಂಗಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.
ಕಾಲೇಜು ಪ್ರಾಂಶುಪಾಲ ನಿರಂಜನಮೂರ್ತಿ, ಸಮ್ಮೇಳನದ ಸಂಚಾಲಕಿ ಪ್ರೊ.ಮಮತ, ಸಹಸಂಚಾಲಕ ಪ್ರೊ.ಸರ್ವಮಂಗಳ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.