ಶಿರಾ: ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಯುಗಾದಿ ಹಬ್ಬಕ್ಕೆ ಗ್ರಾಮಕ್ಕೆ ಬಂದಿದ್ದವರು ಊರಿನ ರಸ್ತೆಯ ದುಸ್ಥಿತಿಯನ್ನು ಕಂಡು ಸ್ವಂತ ಹಣದಲ್ಲಿ ತಾತ್ಕಾಲಿಕವಾಗಿ ಗುಂಡಿಗಳಿಗೆ ಮಣ್ಣು ಹಾಕಿ ಮುಚ್ಚಿಸಿದ್ದಾರೆ.
ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯಲ್ಲಿ ಬಹುತೇಕ ರಸ್ತೆಗಳು ಗುಂಡಿ ಬಿದ್ದಿದ್ದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗುಂಡಿಮುಚ್ಚಲು ಮುಂದಾಗಿರಲಿಲ್ಲ.
ತಾಲ್ಲೂಕಿನ ಮಾದೇನಹಳ್ಳಿ ಗ್ರಾಮದ ರಂಗಪ್ಪ ಅವರ ಪುತ್ರ ಶ್ರೀನಿವಾಸ್ ಅಮೆರಿಕದಲ್ಲಿ ಎಂಜಿನಿಯರ್ ಆಗಿದ್ದು, ಯೋಗೇಶ್ ಡೆನ್ಮಾರ್ಕ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಹಬ್ಬಕ್ಕೆಂದು ಊರಿಗೆ ಬಂದಾಗ ಇಲ್ಲಿನ ರಸ್ತೆ ಕಂಡು ಬೇಸತ್ತರು. ಸ್ವಂತ ಖರ್ಚಿನಲ್ಲಿ ಹೊಸಪಾಳ್ಯ ಕೆರೆ ಏರಿ ಮೇಲಿನ ರಸ್ತೆ ಇಕ್ಕೆಲಗಳಲ್ಲಿದ್ದ ಗುಂಡಿಗಳಿಗೆ ಮಣ್ಣು ಹಾಕಿ ಮುಚ್ಚಿಸಿದ್ದಾರೆ.
ಮಾದೇನಹಳ್ಳಿಯ ವೇಣು ಇವರ ಕೆಲಸಕ್ಕೆ ಕೈಜೋಡಿಸಿದ್ದು, ಉಚಿತವಾಗಿ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.