
ಪ್ರಜಾವಾಣಿ ವಾರ್ತೆಮೈಸೂರು: ಇಲ್ಲಿನ ಕುವೆಂಪು ನಗರದ ಎಸ್‌ಬಿಎಂ ಕಾಲೊನಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಸರೆ ನಿವಾಸಿ ಶಿವಪ್ರಸಾದ್ (24) ಆತ್ಮಹತ್ಯೆಗೆ ಶರಣಾದ ಯುವಕ.
ಈತ ಬಿಬಿಎಂ ಮುಗಿಸಿದ ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್‌ನ ಭೀತಿಯಿಂದ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ʻಜೀವನದಲ್ಲಿ ನಾನು ಬಯಸಿದ ಲೈಫ್ ಸಿಗಲಿಲ್ಲʼ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.
ಕುವೆಂಪು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.