ADVERTISEMENT

ಬಿಜೆಪಿ ಗೆಲುವಿಗೆ ಯುವಮೋರ್ಚಾ ಶ್ರಮ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 2:52 IST
Last Updated 23 ಅಕ್ಟೋಬರ್ 2020, 2:52 IST
ಶಿರಾದಲ್ಲಿ ಗುರುವಾರ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಘಟಕದ ಅಧ್ಯಕ್ಷ ತೇಜಸ್ವಿಸೂರ್ಯ ಉದ್ಘಾಟಿಸಿದರು
ಶಿರಾದಲ್ಲಿ ಗುರುವಾರ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಘಟಕದ ಅಧ್ಯಕ್ಷ ತೇಜಸ್ವಿಸೂರ್ಯ ಉದ್ಘಾಟಿಸಿದರು   

ಶಿರಾ: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ಇದರಲ್ಲಿ ಬಿಜೆಪಿ ಯುವಮೋರ್ಚಾ ಪ್ರಧಾನ ಪಾತ್ರ ವಹಿಸಲಿದೆ ಎಂದು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು.

ನಗರದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಿರ್ಲಕ್ಷದಿಂದಾಗಿ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಆಯ್ಕೆಯಾದರೆ ಉಳಿದ ಎರಡೂವರೆ ವರ್ಷದ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿಯಾಗುವುದು ಎಂದರು.

ADVERTISEMENT

ಸಂಸದ ಪ್ರತಾಪಸಿಂಹ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಗ್ರಾಮಾಂತರ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರವೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.