ADVERTISEMENT

‘ಅರಣ್ಯ ಸಂಪತ್ತು ರಕ್ಷಣೆ ಅರಿವು ಅಗತ್ಯ’

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2017, 5:31 IST
Last Updated 18 ಡಿಸೆಂಬರ್ 2017, 5:31 IST

ಉಡುಪಿ:‌ ‘ಅರಣ್ಯ ಇಲಾಖೆ ಅಧಿಕಾರಿ ಗಳು ಸಮಾಜಮುಖಿ ಚಟುವಟಿಕೆಯಲ್ಲಿ ತೋಡಗಿಸಿಕೊಳ್ಳಬೇಕು’ ಎಂದು ಮಂಗಳೂರು  ಗೇರು ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ ಎಸ್. ನೆಟಾಲ್ಕರ್ ಹೇಳಿದರು.

ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ಸಹಯೋಗದಲ್ಲಿ ಭಾನುವಾರ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಿದ್ದ ವಾರ್ಷಿಕ ಪ್ರತಿಭಾ ಪುರಸ್ಕಾರ, ಹೊಸ ವರ್ಷದ ಡೈರಿ, ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಸಂಪತ್ತ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಜತೆಗೆ ಜನ ಸಾಮಾನ್ಯರು ಕೈಜೋಡಿಸಬೇಕು ಎಂದು ಅವರು ಹೇಳಿದರು.

ADVERTISEMENT

ಅರಣ್ಯ ಅತಿಕ್ರಮಣ ಆದಾಗ  ಅರಣ್ಯ ಸಂರಕ್ಷಣಾ ಕಾಯ್ದೆ ಅನ್ವಯ ಅಧಿಕಾರಿಗಳು ಅನಿರ್ವಾಯವಾಗಿ ಕಾನೂನಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ನಮ್ಮನ್ನು ವೈರಿಗಳಂತೆ ಕಾಣಲಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅರಣ್ಯ ಸಂಪತ್ತು ರಕ್ಷಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.

ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಉಡುಪಿ ಆರ್.ಜಿ. ಭಟ್, ರಾಜ್ಯ ಗೇರು ಅಭಿವೃದ್ಧಿ ನಿಗಮ ಕುಂದಾಪುರ ವಿಭಾಗದ ವ್ಯವಸ್ಥಾಪಕ ಉದಯಕುಮಾರ್ ಜೋಗಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಆರ್ ಸುಬ್ರಹ್ಮಣ್ಯ, ಸಿದ್ದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಗವಾನ್ ದಾಸ್, ಕುದುರೆ ಮುಖವಿಭಾಗದ ಬಿ.ಭಾಸ್ಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಡ್ತಿ ನೀಡಿಲ್ಲ: ಆರೋಪ

ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರಿಗೆ  5 ವರ್ಷಗಳಿಂದ ಯಾವುದೇ ರೀತಿಯಾದ ಬಡ್ತಿ ನೀಡಿಲ್ಲ. ಈ ಬಗ್ಗೆ  ಅರಣ್ಯಸಚಿವ ರಮಾನಾಥ್ ರೈ ಅವರಿಗೆ ಮಾನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂಘದ ಗೌರವಧ್ಯಕ್ಷ ಎಚ್.ದೇವರಾಜ್ ಪಾಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.