ADVERTISEMENT

ಇನ್ನಾ: ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 23 ಮೇ 2012, 9:05 IST
Last Updated 23 ಮೇ 2012, 9:05 IST

ಇನ್ನಾ (ಪಡುಬಿದ್ರಿ): ಇನ್ನಾ ಕಾಂಗ್ರೆಸ್ ಸ್ಥಾನೀಯ ಸಮಿತಿಯಿಂದ ಗ್ರಾಮದ ಜನರಿಗೆ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರ ಭಾನುವಾರ ಸಾಂತೂರುಕೊಪ್ಲ ಪಕ್ಷ ಕಚೇರಿಯಲ್ಲಿ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳ ಶಾಸಕ ಎಚ್.ಗೋಪಾಲ ಭಂಡಾರಿ, ಗ್ರಾಮೀಣ ಜನಸಾಮಾನ್ಯರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಮಹತ್ವಾಕಾಂಕ್ಷೆಯೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ವಾಘನೀಯ. ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರಕ್ಕಾಗಿ ಹೋರಾಟ ನಡೆಸಲಿಲ್ಲ. ಜನರ ಮೂಲಭೂತ ಸಮಸ್ಯೆಗಳಿಗೆ ಹಾಗೂ ಸಾಮಾಜಿಕ ನೆಲೆಯಲ್ಲಿ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.

ಪಕ್ಷದ ಕಚೇರಿಯಲ್ಲಿ ತರಬೇತಿ ಕೇಂದ್ರ ಆರಂಭಗೊಂಡಿದ್ದು, ಗ್ರಾಮಸ್ಥರಿಗೆ ವಯಸ್ಸಿನ ಮಿತಿ ಇಲ್ಲದೆ ಕಂಪ್ಯೂಟರ್ ತರಬೇತು ನೀಡಲಾಗುವುದು. ಗ್ರಾಮೀಣ ಪ್ರದೇಶದ ಎಲ್ಲರೂ ಕಂಪ್ಯೂಟರ್ ಬಗ್ಗೆ ಜ್ಞಾನ ಹೊಂದಬೇಕು ಎಂಬ ಉದ್ದೇಶದಿಂದ ತರಬೇತು ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರಾಕಿ ಡಿಸಿಲ್ವ ಹೇಳಿದರು.

ಸುಮಾರು 4 ಕಂಪ್ಯೂಟರ್‌ನೊಂದಿಗೆ ಸುಮಾರು ಒಂದೂವರೆ ಲಕ್ಷ ರೂ. ವೆಚ್ಚದ ಯೋಜನೆಯನ್ನು ಕೊಡುಗೆಯಾಗಿ ರಾಕಿ ಡಿಸಿಲ್ವಾ ನೀಡಿದ್ದಾರೆ.

ಉತ್ತರ ಪ್ರದೇಶದ ಲಲಿತ್‌ಪುರ ಡಾನ್‌ಬಾಸ್ಕೋ ಚರ್ಚ್ ಧರ್ಮಗುರು ರೆ.ಫಾ.ಫೆಡ್ರಿಕ್ ಮೆಂಡೋನ್ಸಾ, ಇನ್ನಾ ಜುಮ್ಮೋ ಮಸೀದಿ ಖತೀಬ್ ಕೆ.ಎಂ. ಅಬ್ದುಲ್ ರೆಹಮಾನ್ ಫೈಝಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಎಮ್.ಪಿ.ಮೊಯಿದಿನಬ್ಬ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿಶಂಕರ್ ಶೇರಿಗಾರ್, ಹಿಂದುಳಿದ ವರ್ಗಗಳ ಬ್ಲಾಕ್ ಅಧ್ಯಕ್ಷ ದೇವಾಡಿಗ,  ಬೆಳ್ಮಣ್ ತಾಪಂ ಸದಸ್ಯ ಕ್ಷೇವಿಯರ್ ಡಿಮೆಲ್ಲೋ, ಸ್ಥಾನೀಯ ಸಮಿತಿ ಅಧ್ಯಕ್ಷ ಅಮರನಾಥ್ ಶೆಟ್ಟಿ, ಸ್ಥಾನೀಯ ಸಮಿತಿಯ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್‌ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನ್ಯಾನ್ಸಿ ಡಿಸಿಲ್ವಾ, ತಾಪಂ ಮಾಜಿ ಸದಸ್ಯ ಜಯ ಎಸ್.ಕೋಟ್ಯಾನ್, ಇನ್ನಾ ಗ್ರಾಪಂ ಮಾಜಿ ಅಧ್ಯಕ್ಷ ಜಾನ್ ಮೆಂಡೋನ್ಸಾ, ಕುಶ ಆರ್.ಮೂಲ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.